Sunday, March 15, 2026
Flats for sale
Homeಜಿಲ್ಲೆಮಂಗಳೂರು : ಬ್ರಿಜೇಶ್ ಚೌಟ ಹೆಸರಿನಲ್ಲಿ ನಕಲಿ ಜಾತಿಪತ್ರ ವೈರಲ್, ಜಾತಿ ಜಾತಿಗಳ ನಡುವೆ ಕಾಂಗ್ರೆಸ್...

ಮಂಗಳೂರು : ಬ್ರಿಜೇಶ್ ಚೌಟ ಹೆಸರಿನಲ್ಲಿ ನಕಲಿ ಜಾತಿಪತ್ರ ವೈರಲ್, ಜಾತಿ ಜಾತಿಗಳ ನಡುವೆ ಕಾಂಗ್ರೆಸ್ ವಿಷಬೀಜ ಬಿತ್ತುತ್ತಿದೆ ಎಂದ ಬಿಜೆಪಿ, ಆಯೋಗಕ್ಕೆ ದೂರು.

ಮಂಗಳೂರು : ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಿ ರಾಜಕೀಯ ಪಕ್ಷಗಳು ಮತರಾದರನ್ನು ಓಲೈಕೆಗೆ ಪ್ರಯತ್ನಿಸಿದ್ದು ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವ ರೀತಿ ಪರಿಣಾಮ ಬೀಳುತ್ತೋ ಎಂಬುದನ್ನು ನೋಡಬೇಕಾಗಿದೆ.

ಜಿಲ್ಲೆಯಲ್ಲಿ ಬಿಲ್ಲವ – ಬಂಟ ರ ನಡುವೆ ವಾಕ್ಸಮರ ನಡೆಯುತ್ತಿದ್ದು ನಕಲಿ ಪತ್ರ ಹರಿಯಬಿಟ್ಟು ಪಕ್ಷದ ಅಭ್ಯರ್ಥಿಗೆ ಹಿನ್ನಡೆ ಉಂಟು ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಕಾಂಗ್ರೆಸ್ ಚುನಾವಣೆಗೆ ಮುನ್ನವೇ ಸೋಲೊಪ್ಪಿಕೊಂಡಿದೆ ಎಂದಿದೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನಕ್ಕೆ ಇನ್ನು ಒಂದೇ ದಿನ ಬಾಕಿ ಇದ್ದು, ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹೆಸರಿನಲ್ಲಿ ಜಾತಿ ಪತ್ರವೊಂದು ವೈರಲಾಗಿದೆ. ಆದರೆ, ಇದು ನಕಲಿ ಎಂದು ಹೇಳಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದೆ. ಜತೆಗೆ, ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬಂಟ ಸಮುದಾಯದವರು. ನಮ್ಮ ಸಮುದಾಯದ ಅಭ್ಯರ್ಥಿಯನ್ನು ಗೆಲ್ಲಿಸಿ. ಇತರ ಶೂದ್ರ ಸಮುದಾಯಗಳು ಮೆರೆಯದಂತೆ ನೋಡಿಕೊಳ್ಳಿ’ ಎಂದು ವೈರಲ್ ಆದ ಪತ್ರದಲ್ಲಿದೆ. ಬಿಲ್ಲವ ಸಮುದಾಯವನ್ನು ಟಾರ್ಗೆಟ್ ಮಾಡಿ ಪತ್ರ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಇಲ್ಲವ ಸಮುದಾಯಕ್ಕೆ ಸೇರಿದವರು ಎಂಬುದು ಗಮನಾರ್ಹ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪದ್ಮರಾಜ್ ಅವರನ್ನು ಬೆಂಬಲಿಸೋಣ, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸೋಣ. ನಮ್ಮ ಸಮುದಾಯದ ಅಭ್ಯರ್ಥಿಗಳಿಗೆ ಮತ ನೀಡೋಣ ಎಂದು ಅವರು ಬೆಂಬಲಿಗರಿಗೆ ಸತ್ಯಜೀತ್ ಸುರತ್ಕಲ್ ನೀಡಿದ್ದರು.ಇನ್ನೇನು ನಾಳೆ ಜಿಲ್ಲೆಯಲ್ಲಿ ಮತದಾನ ನಡೆಯಲಿದ್ದು ಮತದಾರಪ್ರಭುಗಳು ಯಾರಿಗೆ ಒಲವು ತೋರಲಿದ್ದಾರೆಂದು ಮುಂದೆ ಕಾದುನೋಡಬೇಕಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular