Thursday, September 3, 2026
Homeಜಿಲ್ಲೆಮಂಗಳೂರು : ಬ್ಲಿಂಕಿಟ್‌ನಲ್ಲಿ ಹುಳವಿದ್ದ ಮೊಟ್ಟೆ ಪತ್ತೆ : ಮಂಗಳೂರಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ.

ಮಂಗಳೂರು : ಬ್ಲಿಂಕಿಟ್‌ನಲ್ಲಿ ಹುಳವಿದ್ದ ಮೊಟ್ಟೆ ಪತ್ತೆ : ಮಂಗಳೂರಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ.

ಮಂಗಳೂರು : ಆನ್‌ಲೈನ್‌ ಮೂಲಕ ಖರೀದಿಸಿದ ಮೊಟ್ಟೆಯಲ್ಲಿ ಹುಳ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಹಿನ್ನೆಲೆಯಲ್ಲಿ ಫಳ್ನೀರ್‌ನಲ್ಲಿರುವ ಬ್ಲಿಂಕಿಟ್ ಮಳಿಗೆಗೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಫಳ್ನೀರ್ ಸ್ಕ್ವೇರ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಬ್ಲಿಂಕಿಟ್ ಸಂಸ್ಥೆಯಿಂದ ಗ್ರಾಹಕರೊಬ್ಬರು ಮೊಟ್ಟೆ ಖರೀದಿಸಿದ್ದರು. ಮೊಟ್ಟೆ ಒಡೆದಾಗ ಅದರೊಳಗೆ ಹುಳ ಇರುವುದು ಕಂಡುಬಂದಿದೆ ಎಂದು ಆರೋಗ್ಯ ಸಚಿವರಿಗೆ ದೂರು ಸಲ್ಲಿಸಲಾಗಿತ್ತು. ಈ ದೂರಿನ ಆಧಾರದ ಮೇಲೆ ಅಧಿಕಾರಿಗಳು ಮಳಿಗೆಗೆ ತೆರಳಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಒಡೆದ ಮೊಟ್ಟೆಗಳಿದ್ದ ಪ್ಯಾಕೆಟ್‌ಗಳು ಪತ್ತೆಯಾಗಿದ್ದು, ಅವುಗಳನ್ನು ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳು ಸೂಚಿಸಿದರು.ಅಲ್ಲದೆ, ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿಡುವ ಸ್ಥಳವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುವ ಉದ್ದೇಶದಿಂದ ಮಳಿಗೆಯ ಸಂಗ್ರಹಣಾ ಕೊಠಡಿಯನ್ನು ತಾತ್ಕಾಲಿಕವಾಗಿ ಮುಚ್ಚಿ ಸೀಲ್ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಬ್ಲಿಂಕಿಟ್ ಸಂಸ್ಥೆಗೆ ನೋಟಿಸ್ ಜಾರಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಮಜಾಯಿಷಿ ನೀಡುವಂತೆ ಸೂಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular