Thursday, July 23, 2026
Homeಜಿಲ್ಲೆಮಂಗಳೂರು : ಮಂಗಳೂರು ಜೈಲ್ ಮೇಲೆ ಬೆಳ್ಳಂ ಬೆಳಗ್ಗೆ 150 ಪೊಲೀಸರಿಂದ ದಾಳಿ : ಮೊಬೈಲ್ಸ್,...

ಮಂಗಳೂರು : ಮಂಗಳೂರು ಜೈಲ್ ಮೇಲೆ ಬೆಳ್ಳಂ ಬೆಳಗ್ಗೆ 150 ಪೊಲೀಸರಿಂದ ದಾಳಿ : ಮೊಬೈಲ್ಸ್, ಗಾಂಜಾ, ಡ್ರಗ್ಸ್ ಪತ್ತೆ!

ಮಂಗಳೂರು : ಮಂಗಳೂರು ಪೊಲೀಸರು ಏಕಾಏಕಿ ಮಂಗಳೂರು ಜೈಲಿನ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದು ನಿದ್ರೆಯಲ್ಲಿದ್ದ ಕೈದಿಗಳಿಗೆ ದಂಗುಬಡಿದಂತಾಗಿದೆ ಹಾಗೂ ಅಲ್ಲಿ ನಡೆಯುತ್ತಿದ್ದ ಅಕ್ರಮ ಬಯಲಾಗಿದೆ.

ಮುಂಜಾನೆ ನಾಲ್ಕು ಗಂಟೆಯ ವೇಳೆಗೆ ಜೈಲಿನ ಮೇಲೆ ಏಕಕಾಲದಲ್ಲಿ ನೂರೈವತ್ತಕ್ಕೂ ಅಧಿಕ ಪೊಲೀಸರು ದಾಳಿ ಮಾಡಿದ್ದು ಡ್ರಗ್ಸ್, ಗಾಂಜಾ ಪತ್ತೆಯ ಹಿನ್ನಲೆಯಲ್ಲಿ ತನಿಖೆಗೆ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಆದೇಶ ಹೊರಡಿಸಿದ್ದಾರೆ. ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಮುಂಜಾನೆ 4 ಗಂಟೆಗೆ ಆರಂಭವಾದ ಕಾರ್ಯಾಚರಣೆಯಲ್ಲಿ 2 ಡಿಸಿಪಿಗಳು, 3 ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular