Friday, March 13, 2026
Flats for sale
Homeಜಿಲ್ಲೆಮಂಗಳೂರು : ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಎದುರು ಸ್ಥಳೀಯರ...

ಮಂಗಳೂರು : ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಎದುರು ಸ್ಥಳೀಯರ ಪ್ರತಿಭಟನೆ.

ಮಂಗಳೂರು : ಭಾರೀ ಮಳೆಯಿಂದಾಗಿ ವಿಮಾನ ನಿಲ್ದಾಣದ ರನ್‌ವೇಯಿಂದ ಹರಿದು ಏಳು ಮನೆಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ಕೆಂಜಾರಿನ ಸ್ಥಳೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಪದೇ ಪದೇ ವಿನಂತಿಸಿದರೂ, ರನ್‌ವೇಯಿಂದ ಉಕ್ಕಿ ಹರಿಯುವುದರಿಂದ ತಮ್ಮ ಮನೆಗಳಲ್ಲಿ ನೀರು ನಿಲ್ಲುವ ಬಗ್ಗೆ ನಿವಾಸಿಗಳ ಆತಂಕವನ್ನು ಪರಿಹರಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಕರಂಬಾರ್‌ನಲ್ಲಿ ಖಾಸಗಿ ಆಸ್ತಿ ಮಾಲೀಕರು ಹೆಚ್ಚಿನ ಪ್ರಮಾಣದ ಮಣ್ಣನ್ನು ಸುರಿದು ಒಳಚರಂಡಿಯನ್ನು ನಿರ್ಬಂಧಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಏಳು ಸಂತ್ರಸ್ತ ಮನೆಗಳ ನಿವಾಸಿಗಳು ತೀವ್ರ ಸಂಕಷ್ಟದಲ್ಲಿದ್ದಾರೆ, ಜಲಾವೃತ ಪರಿಣಾಮ ದಿನನಿತ್ಯ ಬಳಸಲು ತೆಗೆದಿಟ್ಟ ದಿನಸಿ ಸಾಮಗ್ರಿಗಳು ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ ಈ ಬಗ್ಗೆ ಅನೇಕ ಬಾರಿ ದೂರು ನೀಡಿದರು ಅಧಿಕಾರಿಗಳು ಸ್ಪಂದಿಸದ ಕಾರಣ ಬೇಸರಗೊಂಡ ಸ್ಥಳೀಯರು ವಿಮಾನ ನಿಲ್ದಾಣದೊಳಗೆ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಪೊಲೀಸರು ಮಧ್ಯಪ್ರವೇಶಿಸಿ, ಮಾರ್ಗವನ್ನು ತೆರವುಗೊಳಿಸಿ, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

ಮಂಗಳೂರು ಉತ್ತರ ಶಾಸಕ ಡಾ.ಭರತ್ ವೈ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ನಿವಾಸಿಗಳ ಅಹವಾಲು ಆಲಿಸಿದರು. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular