ಮಂಗಳೂರು ; ಕೂಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಖಾಸಗಿ ಆಸ್ಪತ್ರೆ ಉದ್ಯೋಗಿ ಮೃತಪಟ್ಟ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಮಾಧವಿ ಎಂದು ತಿಳಿದುಬಂದಿದೆ. ಸ್ಕೂಟರ್ ಚಲಾಯಿಸುತ್ತಿದ್ದಾಗ ರಸ್ತೆಯಲ್ಲಿಧ ದೊಡ್ಡ ಗುಂಡಿಗೆ ಬಿದ್ದ ಪರಿಣಾಮ ಹಿಂಬದಿಯಲ್ಲಿದ್ದ ಮೀನಿನ ಲಾರಿ ಡಿಕ್ಕಿ ಹೊಡೆದು ಸಾವನಪ್ಪಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಾಧವಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು, ಮೀನು ತುಂಬಿದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.
ಜಿಲ್ಲೆಯ ರಸ್ತೆಗಳು ಹದಗೆಟ್ಟಿದ್ದು ಎಷ್ಟು ದೂರು ನೀಡಿದರೂ ಸರಿಪಡಿಸದೆ ಇರುವುದಕ್ಕೆ ಸ್ಥಳೀಯ ನಿವಾಸಿಗಳು ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆಮ, ಮೂಲ್ಕಿಯಿಂದ ಪಂಪ್‌ವೆಲ್‌ವರೆಗಿನ ಹೆದ್ದಾರಿಯಲ್ಲಿ ಹಲವಾರು ಗುಂಡಿಗಳಿದ್ದು ರಸ್ತೆ ದುರಸ್ತಿಗಾಗಿ ಪದೇ ಪದೇ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷಿಸಿ, ಸಾವುನೋವುಗಳು ಸಂಭವಿಸಿದಾಗ ಮಾತ್ರ ಕ್ರಮ ಕೈಗೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ.ಮುಂದಿನ ದಿನಗಳಲ್ಲಿ ತುರ್ತು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ರಸ್ತೆಗಳ ಅಪಾಯಕಾರಿ ಸ್ಥಿತಿಯಿಂದಾಗಿ ಹೆಚ್ಚಿನ ಜೀವಗಳು ಬಲಿಯಾಗಬಹುದು ಎಂದು ನಿವಾಸಿಗಳು ಎಚ್ಚರಿಸಿದ್ದಾರೆ.


