ಮಂಗಳೂರು, ಆ.20: ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಮೊಹಿಯುದ್ದೀನ್ ಬಾವಾ ಹೇಳಿದ್ದಾರೆ.
ಈ ವೇಳೆ ಭಾವುಕರಾದ ಬಾವಾ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಸಮೀಕ್ಷೆಯಲ್ಲಿ ನನ್ನ ಪರವಾಗಿ ಮತಗಳಿದ್ದರೂ ಪಕ್ಷದ ಅಧ್ಯಕ್ಷ ಡಿ ಕೆ ಶಿವಕುಮಾರ್ ಟಿಕೆಟ್ ಮಾರಾಟ ಮಾಡಿದ್ದಾರೆ. ಅವರು ನನ್ನನ್ನು ಶತ್ರುವಿನಂತೆ ಬಿಂಬಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಗುರುವಾರ ಮಧ್ಯಾಹ್ನ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸುವುದಾಗಿ ಬಾವಾ ತಿಳಿಸಿದ್ದಾರೆ.