Thursday, July 23, 2026
Homeಜಿಲ್ಲೆಮಂಗಳೂರು : ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ : ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾ ಮನೆ...

ಮಂಗಳೂರು : ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ : ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ.

ಮಂಗಳೂರು : ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲುತೂರಾಟ ನಡೆಸಿದ ಘಟನೆ ನಡೆದಿದೆ . ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಂಬಂಧಿಸಿದಂತೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು .ಈ ಬಗ್ಗೆ ಸಾಮಾಜಿಕಜಾಲತಾಣದಲ್ಲಿ ಹಲವಾರು ಆಕ್ರೋಶ ಹೊರಹಾಕಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ಸುಮಾರು 11 ಗಂಟೆಗೆ ಹೆಲ್ಮೆಟ್ ಹಾಕಿಕೊಂಡು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿ,ಬಳಿಕ ಕೊಂಚ ಸಮಯ ಬಿಟ್ಟು ಮತ್ತೆ ಕಲ್ಲು ತೂರಾಟ ನಡೆಸಿದ್ದಾರೆ.ವನ್ ಡಿಸೋಜಾ ಅವರ ಪತ್ನಿ ಕವಿತಾ ಡಿಸೋಜಾ ಅವರು ಮನೆ ಬಳಿ ಕಾರು ಪಾರ್ಕ್ ಮಾಡಿ ಒಳಗೆ ಹೋದ ಐದು ನಿಮಿಷದಲ್ಲೇ ಕಲ್ಲು ತೂರಾಟ ನಡೆದಿದೆ.

ಮನೆಯಲ್ಲಿ ಇಬ್ಬರು ಪುತ್ರಿಯರು, ಕವಿತಾ ಅವರ ಸಹೋದರ ಮಾತ್ರ ಇದ್ದರು. ಎರಡನೇ ಬಾರಿ ಕಲ್ಲು ತೂರಾಟ ನಡೆಸುವಾಗ ಐವನ್ ಡಿಸೋಜಾ ಅವರ ಪುತ್ರಿ ಮಹಡಿ ಮೇಲಿಂದ ನೋಡಿದ್ದಾರೆ. ಎರಡು ಬಾರಿ ಕಲ್ಲು ತೂರಾಟ ನಡೆಸಲಾಗಿದ್ದು, ಎರಡು ಬಾರಿಯೂ ಒಂದೇ ತಂಡವೇ ಕಲ್ಲು ತೂರಾಟ ಮಾಡಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಆಗಮಿಸಿ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular