ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿರಂತರ ಮಳೆಯಾಗುವ ಹಿನ್ನೆಲೆ ಅಲ್ಲಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ಥವ್ಯಸ್ಥಗೊಂಡಿದೆ ಈ ಹಿನ್ನೆಲೆ ಮಂಗಳೂರು,ಮುಲ್ಕಿ ,ಉಳ್ಳಾಲ, ಬಂಟ್ವಾಳ,ಬೆಳ್ತಂಗಡಿ,ಸುಳ್ಯ , ಮೂಡಬಿದರೆ ತಾಲೂಕಿನ ಅಂಗನವಾಡಿ,ಪ್ರಾಥಮಿಕ,ಪ್ರೌಢ ಶಾಲೆ ಸರಕಾರಿ ಅನುದಾನಿತ,ಮತ್ತು ಖಾಸಗಿ ವಿದ್ಯಾ ಸಂಸ್ಥೆ ಹಾಗೂ ಪಿ.ಯು ಕಾಲೇಜ್ ಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.





ಮಂಗಳೂರಿನ ಸರ್ಕ್ಯೂಟ್ ಹೌಸ್ ನಿಂದ ಬಿಜೈ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ.ಮೇರಿಹಿಲ್ ಬಳಿ ತಡೆಗೋಡೆ ಕುಸಿದು ನಿಲ್ಲಿಸಿದ ಬೈಕ್ ಗಳಿಗೆ ಹಾನಿಯಾಗಿವೆ. ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ದರ್ಶನ್ ರವರು ಎಚ್ ವಿ ಅವರು ರಾತ್ರಿ ಬಿಜೈ ಬಟ್ಟಗುಡ್ಡ, ಆರ್ಯಸಮಾಜ ರಸ್ತೆ, ಪಂಪ್ವೆಲ್ , ಮಾಲೆಮಾರ್, ಕಾವೂರು ಉಲ್ಲಾಸ ನಗರ, ಕೊಟ್ಟಾರ ಚೌಕಿ ಮತ್ತಿತರ ಕಡೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುತ್ತದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿರುತ್ತದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಇರುವುದರಿಂದ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿ ವಿನಂತಿಸಿದ್ದಾರೆ.