ಮಂಗಳೂರು : ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರು ಅಕ್ಟೋಬರ್ 12 ರ ಗುರುವಾರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಸಕ್ರಿಯ ರೌಡಿಗಳ ಪರೇಡ್ ನಡೆಸಿದರು. ಒಟ್ಟು 262 ಸಕ್ರಿಯ ರೌಡಿಗಳನ್ನು ಸಂಬಂಧಪಟ್ಟ ಎಸಿಪಿಗಳು ಪೊಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿದರು. ರೌಡಿಗಳು ಅಪರಾಧದ ಜೀವನ ತ್ಯಜಿಸಿ ಕಾನೂನು ಪಾಲಿಸುವ ನಾಗರಿಕರಾಗಿ ಮುಖ್ಯವಾಹಿನಿಗೆ ಬರುವಂತೆ ಸಲಹೆ ನೀಡಿದರು. ಇನ್ನು ಮುಂದೆ ಯಾರಾದರೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ಸಿದ್ಧಾರ್ಥ್ ಗೋಯಲ್, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ), ದಿನೇಶ್ ಕುಮಾರ್, ಡಿಸಿಪಿ (ಅಪರಾಧ ಮತ್ತು ಸಂಚಾರ) ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


