ಮಂಗಳೂರು : ಮಂಗಳೂರಿನಲ್ಲಿ 176 ವರ್ಷಗಳಷ್ಟು ಹಳೆಯದಾದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಶಿವಮೊಗ್ಗದ ಮೆದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ ಶುಕ್ರವಾರ ಆಸ್ಪತ್ರೆಯಲ್ಲಿ ನಡೆಯಿತು.
ಶಿವಮೊಗ್ಗ ರಾಗಿಗುಡ್ಡೆ ನಿವಾಸಿ ರೇಖಾ (41) ಅವರು ಮನೆಯಲ್ಲಿ ಅಸ್ವಸ್ಥಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಜನವರಿ 6 ರಂದು ವೆನ್ಲಾಕ್ಗೆ ದಾಖಲಾಗಿದ್ದರು. ಏತನ್ಮಧ್ಯೆ, ವೆನ್ಲಾಕ್ನಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರು ಆಕೆಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ದೃಢಪಡಿಸಿದರು ಮತ್ತು ಅಂಗಾಂಗ ದಾನದ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ತಿಳುವಳಿಕೆ ನೀಡಿದರು. ಅವರ ಒಪ್ಪಿಗೆ ಮೇರೆಗೆ ಮಹಿಳೆಯ ಎರಡು ಕಣ್ಣುಗಳನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಲಿವರ್ ಅನ್ನು ಜೀರೋ ಟ್ರಾಫಿಕ್ನಲ್ಲಿ ಮೈಸೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿನಲ್ಲೂ ಬಡ ಕುಟುಂಬದ ಜೀವ ಸಾರ್ಥಕತೆ ಮೆರೆದಿದ್ದು ಮೆಚ್ಚುವಂತಾಗಿದೆ.