Saturday, March 14, 2026
Flats for sale
Homeಜಿಲ್ಲೆಮಂಗಳೂರು : ಶೃದ್ದಾಂಜಲಿ ಸಭೆಯಲ್ಲಿ ಪ್ರಚೋದನಕಾರಿ ಭಾಷಣ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ...

ಮಂಗಳೂರು : ಶೃದ್ದಾಂಜಲಿ ಸಭೆಯಲ್ಲಿ ಪ್ರಚೋದನಕಾರಿ ಭಾಷಣ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು..!

ಮಂಗಳೂರು : ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕದಡುವ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಸಭೆ 12.05.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದಿತ್ತು ಈ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ರವರು ಭಾಗವಹಿಸಿದ್ದು, ಕಲ್ಲಡ್ಕ ಪ್ರಭಾಕರ್ ಭಟ್ ರವರು ಅಲ್ಲಿ ನೆರೆದಿದ್ದ ಸುಮಾರು 500 ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿದ ಹಿನ್ನೆಲೆ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular