Sunday, March 8, 2026
Flats for sale
Homeಜಿಲ್ಲೆಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಟ್ರೊಲ್ ಮಾಡಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ವ್ಯಕ್ತಿಗಳ ಬಂಧನ..!

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಟ್ರೊಲ್ ಮಾಡಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ವ್ಯಕ್ತಿಗಳ ಬಂಧನ..!

ಮಂಗಳೂರು : ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಗಳ ಪತ್ತೆಗಾಗಿ ಮಂಗಳೂರು ನಗರ ಕಮಿಷನರೇಟ್ ವ್ತಾಪ್ತಿಯಿಂದ ವಿಶೇಷ ತಂಡಗಳನ್ನು ರಚನೆ ಮಾಡಿದ್ದು, ಈ ಕೆಳಕಂಡ ಪ್ರಕರಣಗಳಲ್ಲಿ ಆರೋಪಿತರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಉಡುಪಿ ಜಿಲ್ಲೆಯ ಮೊಹಮ್ಮದ್ ಅಸ್ಲಾಂ,ಸುರತ್ಕಲ್ ನ ಚೇತನ್,ಫರಂಗಿಪೇಟೆಯ ರಿಯಾಝ್ ಇ್ರಬಾಹಿಂ,ಕಸಬಾ ಬೆಂಗ್ರೆಯ ಜಮಾಲ್ ಝಾಕೀರ್,ಹಳೆಯಂಗಡಿಯ ಗುರು ಪ್ರಸಾದ್, ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಿಸಿ ದಸ್ತಗಿರಿ ಮಾಡಿದ್ದಾರೆ.

ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರರಾದ ಸಿದ್ದಾರ್ಥ ಗೋಯಲ್ ಐ.ಪಿ.ಎಸ್ (ಕಾ ಮತ್ತು ಸು) ಮತ್ತು ಶ್ರೀ ರವಿಶಂಕರ್ (ಅ ಮತ್ತು ಸಂ) ರವರ ಮಾರ್ಗದರ್ಶನದಲ್ಲಿ, ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿರವರ ವಿಶೇಷ ತಂಡಗಳಿಂದ ಅಪರಾಧಿಗಳನ್ನು ಪತ್ತೆಹಚ್ಚಿದ್ದು ತನಿಖೆ ಮುಂದುವರೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವ್ಯಕ್ತಿಯೋರ್ವನ ಗಡಿಪಾರಿಗೆ ಸಂಬಂಧಿಸಿದ ವಿಚಾರದಲ್ಲಿ ವಾಟ್ಸ್ ಆಪ್ ಮೂಲಕ ಗಣೇಶ್ ಪ್ರಸಾದ್ ಪುತ್ತೂರು ಎಂಬಾತನು ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ಗಾಳಿ ಸುದ್ದಿಯನ್ನು ಹರಡುತ್ತಾ ಹಾಗೂ ಸ್ಥಳಿಯ ಆಡಳಿತಕ್ಕೆ ಭಯ ಹಾಗೂ ಅಪರಾಧಿಕ ಬೆದರಿಕೆಯನ್ನೊಡ್ಡಿರುವ ಕಾರಣ ನ್ಯಾಯಾಲಯದ ಅನುಮತಿ ಪಡೆದು ಆರೋಪಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 41/2025 ಕಲಂ: 353(1), (b), 351(3) BNS 2023 ರಂತೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular