Sunday, August 16, 2026
Homeಕ್ರೈಂಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ : ಬೆಂಗಳೂರು ನಿವಾಸಿ ಬಂಧನ.

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ : ಬೆಂಗಳೂರು ನಿವಾಸಿ ಬಂಧನ.

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ್ದ ಆರೋಪದಡಿ ಬೆಂಗಳೂರು ನಿವಾಸಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬೆಂಗಳೂರು ವಿದ್ಯಮಾನ್ಯನಗರ ನಿವಾಸಿ ಆನಂದ್ ಎ. ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಫೇಸ್‌ಬುಕ್‌ನಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ ‘ಸನಾತನಿ ಸಿಂಹ’ ಎಂಬ ಫೇಸ್‌ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ರೀತಿಯ ಆಕ್ಷೇಪಾರ್ಹ ಕಮೆಂಟ್ ಮಾಡಲಾಗಿತ್ತು. ಈ ಸಂಬಂಧ 2025ರ ಸೆಪ್ಟೆಂಬರ್ 18ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 131/2025ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 353(2) ಅನ್ವಯ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು ಆರೋಪಿಯನ್ನು 2026ರ ಜೂನ್ 27ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಹಿಂದೆ 7 ಪ್ರಕರಣಗಳು ದಾಖಲು : ತನಿಖೆ ವೇಳೆ ಆರೋಪಿಯ ವಿರುದ್ಧ ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಪ್ರಕರಣದ ಕುರಿತು ವಿಟ್ಲ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular