ಮಂಗಳೂರು : ಸಿಸಿಬಿ ಪೊಲೀಸರು ತಲಪಾಡಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಮಾದಕ ದ್ರವ್ಯ ದಂಧೆಕೋರರನ್ನು ಬಂಧಿಸಿ, ಅವರಿಂದ ಎಂಡಿಎಂಎ ಮಾದಕ ದ್ರವ್ಯ ವಶಪಡಿಸಿಕೊಂಡಿದ್ದಾರೆ. ತಲಪಾಡಿ-ದೇವಿಪುರ ರಸ್ತೆಯ ತಚಣಿ ಪ್ರದೇಶದಲ್ಲಿ ಮೂವರು ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಬೆಂಗಳೂರಿನಿಂದ ಮಾದಕ ವಸ್ತು ಖರೀದಿಸಿ ತಂದಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳಾದ ಜಾಕೀರ್ ಹುಸೇನ್ ಅಲಿಯಾಸ್ ತಾಚಿ (28), ಸಜಿಪಮುನ್ನೂರಿನ ಅಮೀರ್ ಅಲಿಯಾಸ್ ಅಮ್ಮಿ (34) ಮತ್ತು ಉಳ್ಳಾಲದ ಹಫೀಜ್ ಅಲಿಯಾಸ್ ಅಪ್ಪಿ (35) ಬಂಧಿತರು. ಬಂಧಿತರಿಂದ 10 ಲಕ್ಷ ಮೌಲ್ಯದ 200 ಗ್ರಾಂ ಎಂಡಿಎಂಎ, 3 ಮೊಬೈಲ್ ಫೋನ್ ಮತ್ತು ಡಿಜಿಟಲ್ ತೂಕದ ಯಂತ್ರ ಹಾಗೂ 15,70,500 ರೂ. ಬೆಲೆಬಾಳುವ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


