Thursday, November 12, 2026
Homeಜಿಲ್ಲೆಮಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಎಸ್‌ಐಟಿ ವಿಚಾರಣೆ ಚುರುಕು; ವೈದ್ಯ...

ಮಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಎಸ್‌ಐಟಿ ವಿಚಾರಣೆ ಚುರುಕು; ವೈದ್ಯ ಮಹಾಬಲ ಶೆಟ್ಟಿ, ವಾರ್ಡ್ ಬಾಯ್‌ಗೆ ಬುಲಾವ್.!

ಮಂಗಳೂರು : ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ವಿಚಾರಣೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಡಾ. ಮಹಾಬಲ ಶೆಟ್ಟಿ ಹಾಗೂ ಸೌಜನ್ಯ ಅವರ ಮರಣೋತ್ತರ ಪರೀಕ್ಷೆಯ ವೇಳೆ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ವಾರ್ಡ್ ಬಾಯ್ ಅನಿಲ್ ಕುಮಾರ್ ಅವರನ್ನು ವಿಚಾರಣೆಗೆ ಕರೆಸಲಾಗಿದೆ.

ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು ಈ ಹಿಂದೆ ವೈದ್ಯಕೀಯ ತಪಾಸಣೆ ನಡೆಸಿದ್ದ ಡಾ. ಮಹಾಬಲ ಶೆಟ್ಟಿ ಅವರಿಗೆ ಎಸ್‌ಐಟಿ ಅಧಿಕಾರಿಗಳು ಬುಲಾವ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು ಮಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

ಇದೇ ವೇಳೆ, ಸೌಜನ್ಯ ಅವರ ಮರಣೋತ್ತರ ಪರೀಕ್ಷೆ ನಡೆಸುವ ಸಂದರ್ಭದಲ್ಲಿ ವೈದ್ಯರಿಗೆ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ಅನಿಲ್ ಕುಮಾರ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ನಡೆದಿದ್ದ ಪ್ರಕ್ರಿಯೆಗಳು, ವೈದ್ಯಕೀಯ ದಾಖಲೆಗಳು ಹಾಗೂ ಆ ವೇಳೆ ನಡೆದ ಘಟನೆಗಳ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸೌಜನ್ಯ ಪ್ರಕರಣದ ಮರುತನಿಖೆಯ ಭಾಗವಾಗಿ ಎಸ್‌ಐಟಿ ಅಧಿಕಾರಿಗಳು ಹಳೆಯ ಸಾಕ್ಷ್ಯಗಳು ಮತ್ತು ಸಂಬಂಧಿತ ವ್ಯಕ್ತಿಗಳಿಂದ ಮಾಹಿತಿ ಕಲೆಹಾಕುತ್ತಿದ್ದು, ಇಂದಿನ ವಿಚಾರಣೆ ಮಹತ್ವ ಪಡೆದುಕೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular