Thursday, November 26, 2026
Homeಜಿಲ್ಲೆಮಂಗಳೂರು : ಸೌಜನ್ಯ ಪ್ರಕರಣ ಮರುತನಿಖೆಗೆ ಮತ್ತೆ ಗಡುವು ವಿಸ್ತರಣೆ ಸಾಧ್ಯತೆ,ಹೆಚ್ಚಿನ ಕಾಲಾವಕಾಶ ಕೋರಿ ಕೋರ್ಟ್...

ಮಂಗಳೂರು : ಸೌಜನ್ಯ ಪ್ರಕರಣ ಮರುತನಿಖೆಗೆ ಮತ್ತೆ ಗಡುವು ವಿಸ್ತರಣೆ ಸಾಧ್ಯತೆ,ಹೆಚ್ಚಿನ ಕಾಲಾವಕಾಶ ಕೋರಿ ಕೋರ್ಟ್ ಮೊರೆ ಹೋಗಲು ಎಸ್‌ಐಟಿ ಚಿಂತನೆ..!

ಮಂಗಳೂರು : ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಪೂರ್ಣಗೊಳಿಸಲು ನೀಡಲಾಗಿರುವ 90 ದಿನಗಳ ಗಡುವು ಮುಗಿಯಲು ಇನ್ನು ಕೇವಲ 25 ದಿನಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ತನಿಖೆಯ ಅವಧಿಯನ್ನು ವಿಸ್ತರಿಸುವಂತೆ ನ್ಯಾಯಾಲಯದ ಮೊರೆ ಹೋಗಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಚಿಂತನೆ ನಡೆಸಿದೆ ಎನ್ನಲಾಗಿದೆ.

ಡಿಐಜಿ ಚೇತನ್ ಸಿಂಗ್ ರಾಥೋಡ್ ನೇತೃತ್ವದ ಎಸ್‌ಐಟಿ ತಂಡ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಯೊಂದು ದಾಖಲೆ ಹಾಗೂ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದೆ.

ಈ ಹಿನ್ನೆಲೆಯಲ್ಲಿ ಇಂದು ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ತನಿಖಾ ತಂಡದ ಮುಖ್ಯಸ್ಥ ಡಿಐಜಿ ಚೇತನ್ ಸಿಂಗ್ ರಾಥೋಡ್ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಿತು.

ಸಭೆಯಲ್ಲಿ ತನಿಖಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ತನಿಖೆಯ ಪ್ರಗತಿ ಕುರಿತು ಅಭಿಪ್ರಾಯ ಸಂಗ್ರಹಿಸಲಾಯಿತು. ಪ್ರಕರಣದ ತನಿಖೆಯನ್ನು ಸಂಪೂರ್ಣಗೊಳಿಸಲು ಇನ್ನೂ ಎಷ್ಟು ಸಮಯ ಬೇಕಾಗಬಹುದು ಎಂಬ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ.

ತನಿಖೆಯ ಪ್ರಸ್ತುತ ಹಂತ ಹಾಗೂ ಬಾಕಿ ಇರುವ ಕಾರ್ಯಗಳ ಆಧಾರದ ಮೇಲೆ ಹೆಚ್ಚಿನ ಕಾಲಾವಕಾಶ ಕೋರುವ ಕುರಿತು ಎಸ್‌ಐಟಿ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಸೌಜನ್ಯ ಪ್ರಕರಣದ ಮರುತನಿಖೆಗೆ ಮತ್ತಷ್ಟು ಕಾಲಾವಕಾಶ ಸಿಗುತ್ತದೆಯೇ? ನ್ಯಾಯಾಲಯದ ಮುಂದಿನ ನಡೆ ಏನಾಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular