ಮಂಗಳೂರು : ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಲ್ಲಿ (SIT) ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಲಾಗಿದೆ.
SIT ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್ ಅವರನ್ನು ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದ್ದು, ನೂತನ SIT ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್ ಅವರನ್ನು ಮರುನೇಮಕ ಮಾಡಲಾಗಿದೆ.
ಇದೇ ವೇಳೆ, ತನಿಖಾ ತಂಡದಲ್ಲಿದ್ದ ASP ವೆಂಕಟೇಶ್ ಪ್ರಸನ್ನ ಅವರಿಗೂ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ASP ಶ್ರೀನಿಧಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸೌಜನ್ಯ ಪ್ರಕರಣದ ಮರುತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ SIT ತಂಡದ ಪ್ರಮುಖ ಅಧಿಕಾರಿಗಳ ಬದಲಾವಣೆ ಕುತೂಹಲಕ್ಕೆ ಕಾರಣವಾಗಿದೆ.
SIT ತಂಡದಲ್ಲಿ ನಡೆದಿರುವ ಈ ಬದಲಾವಣೆಗಳು ಮುಂದಿನ ತನಿಖೆಯ ಪ್ರಕ್ರಿಯೆಯಲ್ಲಿ ಯಾವ ರೀತಿಯ ಪರಿಣಾಮ ಬೀರಲಿವೆ ಎಂಬುದನ್ನು ಕಾದು ನೋಡಬೇಕಿದೆ.

