Wednesday, November 19, 2025
Flats for sale
Homeಜಿಲ್ಲೆಮಂಗಳೂರು ; 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250 ಕ್ಕೂ ಹೆಚ್ಚು ಸಿಮ್ ಬಳಸಿ...

ಮಂಗಳೂರು ; 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250 ಕ್ಕೂ ಹೆಚ್ಚು ಸಿಮ್ ಬಳಸಿ ಸೈಬರ್ ವಂಚನೆ ಪ್ರಕರಣ,ಇಬ್ಬರು ಖದಿಮರ ಬಂಧನ..!

ಮಂಗಳೂರು ; ಸೈಬ‌ರ್ ವಂಚನೆ ಪ್ರಕರಣಕ್ಕೆ ಸಂಭಂದಿಸಿದ ಂತೆ 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹಾಗೂ 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿದ್ದ ಆರೋಪಿಗಳನ್ಜು ಪೋಲಿಸರು ಬಂಧಿಸಿದ್ದಾರೆ.

ಮಂಗಳೂರು ನಗರ ಸಿ.ಇ.ಎನ್‌ಕ್ರೈಂ ಪೊಲೀಸ್‌ ปู่ ม 45/2024 0 66(2) 66(8) ಐಟಿ ಆಕ್ಟ್ ಮತ್ತು ಕಲಂ.420 ಐಪಿಸಿ ಪ್ರಕರಣದಲ್ಲಿ ಯಾರೋ ಅಪಚಿರಿತ ವ್ಯಕ್ತಿದೂರುದಾರರಿಗೆ ಕಸ್ಟಮ್ಸ್ ಹೆಸರಿನಲ್ಲಿ ಪಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು 7,27,000/-ಹಣವನ್ನು ಪಡೆದು ವಂಚನೆ ಮಾಡಿರುವುವ ದೂರಿನ ಹಿನ್ನೆಲೆ ಪೋಲಿಸರು ಪ್ರಕರಣ ದಾಖಲಿಸಿದ್ದು ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳು ತ್ರಿಪೂರ ನಿವಾಸಿ ದಮೆಂಜಾಯಿ ರಿಯಾಂಗ್ (27) ಹಾಗೂ ಮಣಿಪುರ ನಿವಾಸಿ ಹಂಮ್ಟೆಂಗೆ ರಿಯಾಲ್ ಕೋಮ್ (33) ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು ವಿವರ ಪರಿಶೀಲಿಸಿ ಬ್ಯಾಂಕ್‌ ಖಾತೆದಾರನಾದ Damenjoy Reang ಬೆಂಗಳೂರಿನಲ್ಲಿ ದಸ್ತಗಿರಿ ಹೂಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಬ್ಯಾಂಕ್ ಖಾತೆಗಳನ್ನು ಪಡೆದುಕೊಂಡು ಸೈಬರ್ ವಂಚಕರಿಗೆ ನೀಡಿದ ಸುಳಿವಿನ ಹಿನ್ನೆಲೆ Hmngte Reail kom Mangte amosh ನ್ನು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ದಿನಾಂಕ:16 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ತನಿಖೆಯ ವೇಳೆ ಆರೋಪಿತನಾದ Hmngte Reail kom Mangte amosh 300 ಹೆಚ್ಚು ಬ್ಯಾಂಕ್ ಖಾತೆಗಳನ್ನು ಹಾಗೂ 250 ಕ್ಕೂ ಹೆಚ್ಚು ಸಿಮ್ ಕಾರ್ಡ್ ಗಳನ್ನು ಸೈಬ‌ರ್ ವಂಚನೆಗೆ ಬಳಕೆ ಮಾಡಿರುವುದು ಕಂಡುಬಂದಿದೆ. ಆರೋಪಿಗಳಿಂದ 08-ಮೊಬೈಲ್ ಫೋನ್ ಗಳು, 20-ವಿವಿಧ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳು,18- ವಿವಿಧ ಬ್ಯಾಂಕ್ ಗಳ ಪಾಸ್ ಬುಕ್ ಗಳು,11- ವಿವಿಧ ಬ್ಯಾಂಕ್ ಗಳ ಚೆಕ್ ಬುಕ್ ಹಾಗೂ 7- ಸಿಮ್ ಕಾರ್ಡ್ ಗಳನ್ನು ವಶಪಡಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular