Friday, March 13, 2026
Flats for sale
Homeಜಿಲ್ಲೆಮಂಗಳೂರು: 32 ವರ್ಷದ ಹೆಡ್ ಕಾನ್‌ಸ್ಟೆಬಲ್ ಹೃದಯಾಘಾತದಿಂದ ಸಾವು

ಮಂಗಳೂರು: 32 ವರ್ಷದ ಹೆಡ್ ಕಾನ್‌ಸ್ಟೆಬಲ್ ಹೃದಯಾಘಾತದಿಂದ ಸಾವು

ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ ಸೋಮನಗೌಡ ಚೌಧರಿ (32) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಚೌಧುರಿ ಅವರು ಸಿಎಆರ್ ಕಾನ್ಸ್‌ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಸೇರಿದ್ದರು ಮತ್ತು ನಂತರ ಹೆಡ್ ಕಾನ್‌ಸ್ಟೆಬಲ್ ಆಗಿ ಬಡ್ತಿ ಪಡೆದರು. ಇವರು ಪೊಲೀಸ್ ಕಂಟ್ರೋಲ್ ರೂಂ ಇನ್ಸ್‌ಪೆಕ್ಟರ್‌ಗೆ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ ಕರ್ತವ್ಯಕ್ಕೆ ಹಾಜರಾಗಿ ಅಂಗಡಿಯೊಂದಕ್ಕೆ ಹೋಗಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಅಗಲಿದ ಹೆಡ್ ಕಾನ್‌ಸ್ಟೆಬಲ್‌ಗೆ ಅಂತಿಮ ನಮನ ಸಲ್ಲಿಸಿದರು.

ಬಳಿಕ ಮೃತದೇಹವನ್ನು ಅವರ ಹುಟ್ಟೂರಾದ ವಿಜಯಪುರಕ್ಕೆ ರವಾನಿಸಲಾಯಿತು.
RELATED ARTICLES

LEAVE A REPLY

Please enter your comment!
Please enter your name here

Most Popular