ಮಂಡ್ಯ : ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ ಕಾರಿನಲ್ಲಿ ಅಕ್ರಮವಾಗಿ ಚೀಲದಲ್ಲಿ ಸಾಗಿಸುತ್ತಿದ್ದ 1 ಕೋಟಿ ನಗದು ಪತ್ತೆಯಾಗಿದ್ದು, ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ ಹೋಗುತ್ತಿದ್ದ ಕಾರನ್ನು ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಪೊಲೀಸರು ಕೊಂಗಬೋರನದೊಡ್ಡಿ ಬಳಿ ನಿನ್ನೆ ಸಂಜೆ 7 ಗಂಟೆಯ ವೇಳೆ ತಡೆದು ಪರಿಶೀಲಿಸಿದಾಗ ಅದರಲ್ಲಿ 99 ಲಕ್ಷದ 20 ಸಾವಿರ ಹಣ ಪತ್ತೆಯಾಗಿದೆ. ಯಾವುದೇ ದಾಖಲೆ ಇಲ್ಲದೇ ಹಣ ಸಾಗಿಸುತ್ತಿರುವುದು ಕಂಡುಬAದ ಹಿನ್ನೆಲೆಯಲ್ಲಿ ಹಣ ಹಾಗೂ ಕಾರು ವಶಕ್ಕೆ ಪಡೆಯಲಾಗಿದೆ.
ಗಿರೀಶ್ ಎಂಬವರ ಕಾರಿನಲ್ಲಿ ಈ ಹಣ ದೊರೆತಿದೆ. ಚೆಕ್ ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ.ಆರ್.ಪ್ರಸಾದ್, ಚುನಾವಣಾಧಿಕಾರಿ ಲೋಕನಾಥ್ ಹಾಗೂ ಪೊಲೀಸ್ ಸಿಬ್ಬಂದಿ ಪರಿಶೀಲನಾ ಕಾರ್ಯ ನಡೆಸಿದ್ದಾರೆ.
ಈ ಬಗ್ಗೆ ಗಿರೀಶ್ ಅವರನ್ನು ಚುನಾವಣಾಧಿಕಾರಿಗಳು ವಿಚಾರಣೆ ನಡೆಸಿದ್ದು ಸೂಕ್ತ ಉತ್ತರ, ದಾಖಲೆ ನೀಡದ ಕಾರಣ ಹಣ ಸೀಜ್ ಮಾಡಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಶಪಡಿಸಿಕೊಂಡ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವುದಾಗಿ ಮಂಡ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಕಾರಲ್ಲಿ ಹಣ ಪತ್ತೆ:
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಚೆಕ್ ಪೋಸ್ಟ್ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ದಾಖಲೆ ಇಲ್ಲದೇ ಭಾರೀ ಮೊತ್ತದ ಹಣ ಸಾಗಿಸುತ್ತಿದ್ದರೆ ವಶಕ್ಕೆ ಪಡೆದು ಕ್ರಮ ಕೈಗೊಳ್ಳುತ್ತಿದ್ದಾರೆ.
15ಕೋಟಿ ಜಪ್ತಿ:
ಕಳೆದ ಮಾರ್ಚ್ 16 ರಂದು ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಯಾದ ೨೪ ಗಂಟೆಯಲ್ಲಿ ರಾಜ್ಯದಲ್ಲಿ15.89 ಕೋಟಿ ರೂ ಮೌಲ್ಯದ ನಗದು, ಮದ್ಯ ಮತ್ತು ಬೆಲೆಬಾಳುವ ಲೋಹಗಳನ್ನು ಚುನಾವಣಾ ಆಯೋಗ ವಶಕ್ಕೆ ಪಡೆದಿದೆ. ರಾಜ್ಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನೀತಿ ಸಂಹಿತೆ ಉಲ್ಲAಘನೆಯಡಿ ಮೊದಲ ದಿನ ನಗದು ರೂಪದಲ್ಲಿ 45.76 ಲಕ್ಷ ರೂ, ಜೊತೆಗೆ 15.37 ಕೋಟಿ ರೂ. ಮೌಲ್ಯದ ಮದ್ಯ, ಇತರೆ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಆಯೋಗ ತಿಳಿಸಿದೆ.
8 ಲಕ್ಷ ರೂ. ವಶ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ ರೂ. ಹಣವನ್ನು ನಗರದ ಬಟವಾಡಿ ಚೆಕ್ಪೋಸ್ಟ್ ಬಳಿ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬೆAಗಳೂರಿನ ತಸೀನಾ ಬಾನು ಎಂಬುವರು ತುಮಕೂರು ನಗರಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಬಟವಾಡಿ ಚೆಕ್ಪೋಸ್ಟ್ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ಕಾರಿನಲ್ಲಿದ್ದ8 ಲಕ್ಷ ರೂ. ಪತ್ತೆಯಾಗಿದೆ. ಕಾರಿನಲ್ಲಿದ್ದವರು ನಗರದಲ್ಲಿ ನಿವೇಶನ ಖರೀದಿಸಲು ಹಣದ ಸಹಿತ ಬಂದಿದ್ದರು ಎಂದು ಹೇಳಲಾಗಿದೆ. ಆದರೆ ಹಣದ ಮೂಲಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆ ಸಲ್ಲಿಸಿಲ್ಲ. ಹಾಗಾಗಿ ಹಣ ಮುಟ್ಟುಗೋಲು ಹಾಕಿಕೊಂಡಿದ್ದು, ಜಿಲ್ಲಾ ಖಜಾನೆಗೆ ಜಮೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಚೆಕ್ಪೋಸ್ಟ್ನಲ್ಲಿ ಚುನಾವಣಾಧಿಕಾರಿ ಪವನ್ಕುಮಾರ್ ಹಾಗೂ ಪೊಲೀಸ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದರು.


