ಮುಂಬೈ : ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದು ಟಿ-೨೦ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, 34 ವರ್ಷ ವಯಸ್ಸಿನ ಹಿರಿಯ ವೇಗಿ ಮೊಹಮ್ಮದ್ ರಾಷ್ಟ್ರ ತಂಡಕ್ಕೆ ಮರಳಿದ್ದಾರೆ.
ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಅಕ್ಷರ್ ಪಟೇಲ್ ಉಪನಾಯಕ. ಪ್ರವಾಸಿ ಇಂಗ್ಲೆಂಡ್ ವಿರುದ್ಧ ಐದು ಟಿ-20 ಪಂದ್ಯಗಳ ಸರಣಿ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದ್ದು, ಮೊದಲ ಟಿ-20 ಪಂದ್ಯ ಜ 22, ಕೊಲ್ಕತಾದಲ್ಲಿ, ಎರಡನೇ ಪಂದ್ಯ ಜ 25 ರಂದು ಚೆನ್ನೈ ನಲ್ಲಿ, 3 ನೇ ಪಂದ್ಯ ಜ 28 ರಂದು ರಾಜಕೋಟ್‌ನಲ್ಲಿ, 4ನೇ ಪಂದ್ಯ ಜ 31 ರಂದು ಪುಣೆಯಲ್ಲಿ ಹಾಗೂ 5 ನೇ ಹಾಗೂ ಅಂತಿಮ ಟಿ-20 ಪಂದ್ಯ ಫೆ 2 ರಂದು ಮುಂಬೈನಲ್ಲಿ ನಡೆಯಲಿವೆ.
ಇಂಗ್ಲೆಂಡ್ ವಿರುದ್ಧದ ಐದು ಟಿ-20 ಪಂದ್ಯಗಳ ಸರಣಿಗೆ ಪ್ರಕಟಿಸಲಾದ ಭಾರತ ತಂಡ ಇಂತಿದೆ. ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಸರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).