Wednesday, August 5, 2026
Homeದೇಶಮುಂಬೈ : ಹಿರಿಯ ನಟ ಪ್ರದೀಪ್ ರಾಮ್ ಸಿಂಗ್ ರಾವತ್ ನಿಧನ ; ಗಜನಿ ಖ್ಯಾತಿಯ...

ಮುಂಬೈ : ಹಿರಿಯ ನಟ ಪ್ರದೀಪ್ ರಾಮ್ ಸಿಂಗ್ ರಾವತ್ ನಿಧನ ; ಗಜನಿ ಖ್ಯಾತಿಯ ನಟ ಇನ್ನಿಲ್ಲ.

ಮುಂಬೈ : ಗಜನಿ, ಲಗಾನ್ ಸೇರಿದಂತೆ ಹಲವು ಸೂಪರ್‌ಹಿಟ್ ಚಿತ್ರಗಳಲ್ಲಿ ಖಳನಾಯಕನಾಗಿ ಜನಪ್ರಿಯತೆ ಗಳಿಸಿದ್ದ ಹಿರಿಯ ನಟ ಪ್ರದೀಪ್ ರಾವತ್ ಅವರು 74ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದರು.
ಪ್ರದೀಪ್ ರಾವತ್ ಅವರು ಸರ್ಫರೋಷ್, ಸೈ, ಛತ್ರಪತಿ, ಪಾರ್ಥ ಸೇರಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಕನ್ನಡದ ಅನೇಕ ಚಿತ್ರಗಳಲ್ಲಿ ತಮ್ಮ ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು. ದೂರದರ್ಶನದ ಮಹಾಭಾರತ ಧಾರಾವಾಹಿಯಲ್ಲಿ ಅಶ್ವತ್ಥಾಮ ಪಾತ್ರವನ್ನು ನಿರ್ವಹಿಸಿ ಮನೆಮಾತಾಗಿದ್ದರು.

ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಭಾರತೀಯ ಚಿತ್ರರಂಗವು ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿದೆ ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular