ಮುಜಫರ್‌ಪುರ : ರಾಷ್ಟçಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಮಾನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಹಾರದ ಮುಜಾಫರ್ ನಗರದ ಜಿಲ್ಲೆಯ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
ದೇಶದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟçಪತಿಗಳ ಸಾಂವಿಧಾನಿಕ ಅಧಿಕಾರವನ್ನು ಅಗೌರವಿಸಿದ ಆರೋಪದ ಮೇಲೆ ಸೋನಿಯಾ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ವಕೀಲ ಸುಧೀರ್ ಓಜಾ ಅವರು ಕೋರಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾAಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನೂ ಆರೋಪಿಗಳೆಂದು ಓಜಾ ಹೆಸರಿಸಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.