Tuesday, November 10, 2026
Homeರಾಜ್ಯಮೈಸೂರು : ಅರಮನೆ ವಶಕ್ಕೆ ಪಡೆಯಲು ಸರ್ಕಾರದ ಯತ್ನ: ಸಂಸದ ಯದುವೀರ್ ಒಡೆಯರ್ ಗಂಭೀರ ಆರೋಪ..!

ಮೈಸೂರು : ಅರಮನೆ ವಶಕ್ಕೆ ಪಡೆಯಲು ಸರ್ಕಾರದ ಯತ್ನ: ಸಂಸದ ಯದುವೀರ್ ಒಡೆಯರ್ ಗಂಭೀರ ಆರೋಪ..!

ಮೈಸೂರು : ಮೈಸೂರು ಅರಮನೆಯನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲು ಕಾರ್ಯಾಂಗವನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗಂಭೀರ ಆರೋಪ ಮಾಡಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಈಗಾಗಲೇ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಾರ ನ್ಯಾಯಾಲಯದಲ್ಲಿದ್ದು, ನಮಗೆ ನ್ಯಾಯ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.

ಈ ಬಾರಿಯ ದಸರಾ ಆಚರಣೆಯಲ್ಲಿ ಕಂಡುಬಂದ ಲೋಪದೋಷಗಳನ್ನು ಮುಂದಿನ ದಸರಾ ವೇಳೆಗೆ ಸರಿಪಡಿಸಿಕೊಳ್ಳಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅರಮನೆ ಆವರಣದ ಭದ್ರತೆಯ ಜವಾಬ್ದಾರಿಯನ್ನು ಹೊರಗಿನ ಏಜೆನ್ಸಿಗಳಿಗೆ ವಹಿಸಿದ್ದರಿಂದ ಸಾಂಪ್ರದಾಯಿಕ ಜಟ್ಟಿ ಕಾಳಗಕ್ಕೆ ಅಡಚಣೆ ಉಂಟಾಯಿತು. ಇಂತಹ ಸಾಂಪ್ರದಾಯಿಕ ಆಚರಣೆಗಳಿಗೆ ಯಾವುದೇ ತೊಂದರೆಯಾಗದಂತೆ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಯದುವೀರ್ ಒಡೆಯರ್ ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular