Thursday, March 12, 2026
Flats for sale
Homeರಾಜ್ಯಮೈಸೂರು : ಎಕ್ಸ್‌ಪ್ರೆಸ್‌ವೇ - ಮದ್ದೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವು.

ಮೈಸೂರು : ಎಕ್ಸ್‌ಪ್ರೆಸ್‌ವೇ – ಮದ್ದೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವು.

ಮೈಸೂರು : ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ನೀರಜ್ ಕುಮಾರ್ (50), ಅವರ ಪತ್ನಿ ಸೆಲ್ವಿ (47), ಕಾರು ಚಾಲಕ ಮಂಡ್ಯ ಮೂಲದ ನಿರಂಜನ್ (35) ಮೃತ ದುರ್ದೈವಿಗಳು.

ನೀರಜ್ ಕುಮಾರ್ ಅವರು ಪತ್ನಿ ಸೆಲ್ವಿಯೊಂದಿಗೆ ಬೆಂಗಳೂರಿನಿಂದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಬೆಂಗಳೂರಿಗೆ ಹೋಗುತ್ತಿದ್ದ ಟಾಟಾ ನೆಕ್ಸನ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನೆಕ್ಸಾನ್ ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ಸಂಪೂರ್ಣ ಜಖಂಗೊಂಡಿದೆ. ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular