Sunday, July 26, 2026
Homeಕ್ರೈಂಮೈಸೂರು : ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ.

ಮೈಸೂರು : ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ.

ಮೈಸೂರು : ಮೈಸೂರಿನ ಕುಂಬಾರಕೊಪ್ಪಲು ಎಂಬಲ್ಲಿ ಶನಿವಾರ ಮಧ್ಯಾಹ್ನ 30 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಹರ್ಷಿತಾ (21) ಮೃತ ಮಹಿಳೆ. ಗುಂಡ್ಲುಪೇಟೆ ತಾಲೂಕಿನ ಬೀರಂಬಾಡಿ ಮೂಲದ ಮಹದೇವ್ ಆರೋಪಿ. ತಡೆಯಲು ಯತ್ನಿಸಿದ ಅತ್ತೆ ಗೀತಾ ಅವರ ಮೇಲೂ ಹಲ್ಲೆ ನಡೆಸಿ ಗಾಯಗೊಳಿಸಿದ್ದರು ಕೂಡಲೇ ಕೆ.ಆರ್.ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ,

ಒಂದೂವರೆ ವರ್ಷಗಳ ಹಿಂದೆ ವಿವಾಹವಾಗಿದ್ದ ಹರ್ಷಿತಾ, ಮಹದೇವ್ ಜತೆಗಿನ ಸಮಸ್ಯೆಯಿಂದಾಗಿ ಪೋಷಕರ ಮನೆಗೆ ಬಂದಿದ್ದರು ಎನ್ನಲಾಗಿದೆ. ಮಹದೇವ್ ಆಕೆಯನ್ನು ಕರೆದುಕೊಂಡು ಹೋಗಲು ಬಂದಾಗ ಹರ್ಷಿತಾ ತನ್ನೊಂದಿಗೆ ಹೋಗಲು ನಿರಾಕರಿಸಿದ್ದರಿಂದ, ತನ್ನ ಬ್ಯಾಗ್‌ನಲ್ಲಿ ಚಾಕು ತಂದಿದ್ದ ಮಹದೇವ್ ಹರ್ಷಿತಾಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಟಗಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular