Saturday, July 25, 2026
Homeರಾಜ್ಯಯಾದಗಿರಿ : ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ.

ಯಾದಗಿರಿ : ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ.

ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

ಶಾಲೆಗೆ ಹೋಗಿರುವ ಮಕ್ಕಳು ಬೋರ್ವೆಲ್ ನೀರು ಕುಡಿದಿದ್ದರಿಂದ ಅಸ್ವಸ್ಥರಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ.ಸುರಪುರ ತಾಲೂಕು ಆಸ್ಪತ್ರೆಯಲ್ಲಿ 5 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕೆಲ ಮಕ್ಕಳು ಚಿಕಿತ್ಸೆ ಪಡೆದು ಮರಳಿ ಊರಿಗೆ ತೆರಳಿದರೆ ಇನ್ನಷ್ಟು ಮಕ್ಕಳು ಶಹಪುರ ಆಸ್ಪತ್ರೆಗೆ ಹೋಗಿರುವುದಾಗಿ ಹೇಳಲಾಗುತ್ತಿದೆ.ಶಾಲೆಯಲ್ಲಿ ಕಲುಷಿತ ನೀರು ಕುಡಿದೆ ಮಕ್ಕಳು ಹೀಗೆ ಆಗಿದ್ದಾರೆ ಎಂದು ಪೋಷಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular