ಯಾದಗಿರಿ ; ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿ ಸಾವನಪ್ಪಿದ್ದು ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ.
ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ಐವರು ಸಾವನಪ್ಪಿದ್ದು ಸುರಪುರದಿಂದ ತಿಂಥಣಿ ಕಡೆಗೆ ಹೊರಟ್ಟಿದ್ದ ಬೈಕ್ ಗೆ ಸಾರಿಗೆ ಬಸ್ ಗುದ್ದಿ ಈ ದುರ್ಘಟನೆ ನಡೆದಿದೆ ಎಂದು ತಿಳಿದಿದೆ.
ಸಾರಿಗೆ ಗುದ್ದಿದ ರಭಸಕ್ಕೆ ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು ಮೃತರ ಸ್ವವಿವರ ಇನ್ನೂ ತಿಳಿದು ಬಂದಿಲ್ಲ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಸ್ಥಳೀಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.