Thursday, August 27, 2026
Homeಜಿಲ್ಲೆಯಾದಗಿರಿ : RSS ಪಥಸಂಚಲನದಲ್ಲಿ ಭಾಗಿಯಾದ ಇಬ್ಬರು ಶಿಕ್ಷಕರು ಅಮಾನತು.

ಯಾದಗಿರಿ : RSS ಪಥಸಂಚಲನದಲ್ಲಿ ಭಾಗಿಯಾದ ಇಬ್ಬರು ಶಿಕ್ಷಕರು ಅಮಾನತು.

ಯಾದಗಿರಿ : ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಹುಣಸಗಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ ಜೋಷಿ ಹಾಗೂ ಕುಪ್ಪಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ ಅವರನ್ನು ಯಾದಗಿರಿ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 10ರಂದು ಹುಣಸಗಿಯಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ. ಇದೇ ವೇಳೆ ಅಕ್ಟೋಬರ್ 12ರಂದು ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಶಿಕ್ಷಕ ಗುರುರಾಜ ಜೋಷಿ ಭಾಗಿಯಾಗಿದ್ದರು ಎನ್ನಲಾಗಿದೆ.

ಸರ್ಕಾರಿ ಸೇವೆಯಲ್ಲಿರುವ ಶಿಕ್ಷಕರು ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಲಾಗಿದ್ದು, ತನಿಖೆಯ ಬಳಿಕ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಶಿಕ್ಷಕರ ವಿರುದ್ಧ ಅಮಾನತು ಕ್ರಮ ಕೈಗೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular