ರಾಮನಗರ ; ಜೆಡಿಎಸ್ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ಮಾಡಿದ್ದು ತೋಟದ ಮನೆಯಲ್ಲಿ 250ಕ್ಕೂ ಹೆಚ್ಚು ಜನರಿಗಾಗಿ ಬಾಡೂಟ ತಯಾರಿಸಲಾಗಿತ್ತು ಎಂಬ ಮಾಹಿತಿ ಮೇರೆಗೆ ತೋಟದ ಮನೆಯ ಗೇಟ್ ಒಪನ್ ಮಾಡಿ ಚಿಕನ್, ಮಟನ್ ಮತ್ತು ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸರ ನೇತೃತ್ವದಲ್ಲಿ ಒಳಹೋಕ್ಕ ಚುನಾವಣಾ ಅಧಿಕಾರಿಗಳು ತೋಟದ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.ಜೊತೆಗೆ ಬಾಡೂಟಕ್ಕೆ ತಯಾರಿಯಲ್ಲಿದ್ದ ಪೆಂಡಾಲ್ ಹಾಗೂ ಚೇರ್ ತಗೆಸಿದ್ದು ಆಯೋಜಿಸಿದ್ದ ಬಾಡೂಟವನ್ನು ಸ್ಥಗಿತಗೊಳಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಹಿಸಿದ ಕುಮಾರಸ್ವಾಮಿ ತಹಶೀಲ್ದಾರ್ಗೆ ಪದೇ ಪದೇ ಕರೆ ಮಾಡಿ ಒತ್ತಡ ಹಾಕಿಸಿದ್ದಾರೆ. ನಮ್ಮ ಮನೆಯಲ್ಲಿ ಪರಿಶೀಲಿಸಿದ್ದಾರೆ ಅಲ್ಲಿ ಏನೂ ಸಿಕ್ಕಿಲ್ಲಿ. ನನ್ನ ತೋಟದ ಮನೆಯಲ್ಲಿ 120 ಜನ ಕೆಲಸ ಮಾಡುತ್ತಿದ್ದಾರೆ. ಕೆಲಸಗಾರರಿಗೆ ಮನೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದೇನೆ ಅಷ್ಟೇ ಎಂದು ಕೈತೊಳೆದುಕೊಂಡಿದ್ದಾರೆ.
ತಹಶೀಲ್ದಾರ್ಗೆ ಪದೇ ಪದೇ ಕರೆ ಮಾಡಿ ಒತ್ತಡ ಹಾಕಿಸಿದ್ದಾರೆ. ನಮ್ಮ ಮನೆಯಲ್ಲಿ ಪರಿಶೀಲಿಸಿದ್ದಾರೆ ಅಲ್ಲಿ ಏನೂ ಸಿಕ್ಕಿಲ್ಲಿ. ನನ್ನ ತೋಟದ ಮನೆಯಲ್ಲಿ 120 ಜನ ಕೆಲಸ ಮಾಡುತ್ತಿದ್ದಾರೆ. ಕೆಲಸಗಾರರಿಗೆ ಮನೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದೇನೆ. ಚುನಾವಣಾ ಅಧಿಕಾರಿಗಳು ಎಫ್ಐಆರ್ ದಾಖಲಿಸಲು ತಯಾರಿ ನಡೆಸಿದ್ದು ಬಾಡೂಟವೆಂದು ತೋಟಕ್ಕೆ ಬಂದ ಕಾರ್ಯಕರ್ತರಿಗೆ ನಿರಾಸೆಯಾಗಿದ್ದು, ಸಪ್ಪೆ ಮುಖ ಮಾಡಿಕೊಂಡು ವಾಪಸ್ ಹೋಗಿದ್ದಾರೆಂದು ತಿಳಿದಿದೆ.


