Sunday, May 31, 2026
Flats for sale
Homeರಾಜ್ಯರಾಯಚೂರು : ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು; ಶೋಧ ಕಾರ್ಯ ಮುಂದುವರಿಕೆ.

ರಾಯಚೂರು : ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು; ಶೋಧ ಕಾರ್ಯ ಮುಂದುವರಿಕೆ.

ರಾಯಚೂರು : ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ದುರ್ಘಟನೆ ಸಂಭವಿಸಿದೆ.

ನೀರುಪಾಲಾದವರನ್ನು ಹೈದರಾಬಾದ್ ಮೂಲದ ಯುವನ್ ಚಂದ್ರ (5) ಮತ್ತು ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25) ಹಾಗೂ ಧನುಷ್ (23), ಉರವಕೊಂಡ ಮೂಲದ ಸಂಧ್ಯಾ (22) ಎಂದು ಗುರುತಿಸಲಾಗಿದೆ.

ಸತ್ಯನಾರಾಯಣ ಪೂಜೆ ನಿಮಿತ್ತ ಸಂಬಂಧಿಕರ ಮನೆಗೆ ಆಗಮಿಸಿದ್ದ ಕುಟುಂಬದ ಸದಸ್ಯರು ಪೂಜೆ ಮುಗಿದ ಬಳಿಕ ತುಂಗಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನದಿಯ ಆಳದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ನೀರಿಗೆ ಇಳಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಯುವತಿ ಅಪರ್ಣಾ ಪ್ರಾಣಾಪಾಯದಿಂದ ಪಾರಾಗಿದ್ದು, ಧನುಷ್ ಅವರ ಮೃತದೇಹ ಪತ್ತೆಯಾಗಿದೆ. ಉಳಿದವರಿಗಾಗಿ ಪೊಲೀಸರು ಹಾಗೂ ಸ್ಥಳೀಯ ಮೀನುಗಾರರು ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.ಇದೇ ವೇಳೆ, ನೀರುಪಾಲಾದವರ ಹುಡುಕಾಟದ ಸಂದರ್ಭದಲ್ಲಿ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವವೂ ಪತ್ತೆಯಾಗಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಘಟನಾ ಸ್ಥಳಕ್ಕೆ ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಕ್ಷಣಾ ಮತ್ತು ಶೋಧ ಕಾರ್ಯದ ಪ್ರಗತಿಯನ್ನು ಅವಲೋಕಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular