ವಿಜಯನಗರ : ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿದ್ದ ಮೂವರ ಪೈಕಿ ಯಮನೂರನ ಮೃತದೇಹ ಪತ್ತೆಯಾಗಿದೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೂವರು ಮೀನು ಹಿಡಿಯಲು ತೆರಳಿದ್ದರು.
ಬಳಿಕ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಆರಂಭಿಸಲಾಗಿತ್ತು. ನಾಪತ್ತೆಯಾಗಿದ್ದವರಲ್ಲಿ ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ಸೇರಿದ್ದರು. ಇದೀಗ ಯಮನೂರನ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ಹಾಗೂ ಸ್ಥಳೀಯರು ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
ಇನ್ನುಳಿದ ಇಬ್ಬರಿಗಾಗಿ ಪೊಲೀಸರು, ಸ್ಥಳೀಯರು ಹಾಗೂ SDRF ತಂಡದಿಂದ ಶೋಧ ಕಾರ್ಯ ಮುಂದುವರಿದಿದೆ. ಘಟನೆ ಸಂಬಂಧ ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

