Wednesday, August 26, 2026
Homeರಾಜ್ಯವಿಜಯಪುರ : ಭೀಕರ ದುರಂತ : ತಾಯಿ ಸೇರಿ 6 ಮಂದಿ ಶವವಾಗಿ ಪತ್ತೆ,ಕೌಟುಂಬಿಕ...

ವಿಜಯಪುರ : ಭೀಕರ ದುರಂತ : ತಾಯಿ ಸೇರಿ 6 ಮಂದಿ ಶವವಾಗಿ ಪತ್ತೆ,ಕೌಟುಂಬಿಕ ಕಲಹ ಶಂಕೆ..!

ವಿಜಯಪುರ : ವಿಜಯಪುರ ತಾಲೂಕಿನ ತೊರವಿ ಗ್ರಾಮದಲ್ಲಿ ಆ.24ರಂದು ನಾಪತ್ತೆಯಾಗಿದ್ದ ತಾಯಿ ಹಾಗೂ ಐವರು ಮಕ್ಕಳು ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಮೃತರನ್ನು ಶೋಭಾ ಜಾಲಗೇರಿ (45) ಹಾಗೂ ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7) ಮತ್ತು ವಿಕಾಸ (5) ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆ?
ಶೋಭಾ ಜಾಲಗೇರಿ ಅವರು ಪತಿ ಮಲಕಾರಿ ಭೀಮರಾಯ ಜಾಲಗೇರಿ ಅವರೊಂದಿಗೆ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದರು ಎನ್ನಲಾಗಿದೆ. ಬಳಿಕ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೊರಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆ.24ರಂದು ಶೋಭಾ ಹಾಗೂ ಐವರು ಮಕ್ಕಳು ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ಅವರಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಆರು ಮಂದಿಯೂ ಶವವಾಗಿ ಪತ್ತೆಯಾಗಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular