Saturday, March 14, 2026
Flats for sale
Homeರಾಜ್ಯವಿಜಯಪುರ : ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿ 4 ಜನ ಗಂಭೀರ,15...

ವಿಜಯಪುರ : ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿ 4 ಜನ ಗಂಭೀರ,15 ಮಂದಿಗೆ ಗಾಯ.

ವಿಜಯಪುರ : ಹೊಲದಲ್ಲಿ ಕಸ ತೆಗೆಯುವ ಕೆಲಸ ಮಾಡಲು ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದು 15 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲುಕಿನ ಜಂಗಮುರಾಳ ಹತ್ತಿರ ನಡೆದಿದೆ.

ಗಂಭೀರ ಸ್ಥಿತಿಯಲ್ಲಿರುವ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಇನ್ನುಳಿದವರಿಗೆ ಇಲ್ಲಿನ ತಾಲುಕು ಸರ್ಕಾರಿ ಅಸ್ಪತ್ರೆಯಲ್ಲಿ ಅಡಳಿತ ವೈದ್ಯಾಧಿಕಾರಿ ಡಾ: ಅನೀಲಕುಮಾರ ಶೇಗುಣಸಿ ನೇತೃತ್ವದ ವೈದ್ಯರು, ವೈದ್ಯಕೀಯ ಸಿಬ್ಬಂದಿ ತಂಡ ಚಿಕಿತ್ಸೆ ನೀಡತೊಡಗಿದೆ. ಸಣ್ಣ ಪುಟ್ಟ ಗಾಯಗಳಾದವರು ಚೇತರಿಸಿಕೊಳ್ಳುತ್ತಿದ್ದಾರೆ. ಎದುರಿಗೆ ದಿಢಿರನ್ ದನವೊಂದು ಬಂದದ್ದರಿಂದ ಅದಕ್ಕಿ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಅಸ್ಪತ್ರೆಗೆ ಭೇಟಿ ನೀಡಿರುವ ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿ ಗುಣಮಟ್ಟದ ಚಿಕಿತ್ಸೆ ಕೊಡುವಂತೆ ಕೋರಿದರು. ಘಟನೆ ಕುರಿತು ಉದಯವಾಣಿಯೊಂದಿಗೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಅವರು ಗಾಯಾಳುಗಳೆಲ್ಲ ಹುಲಗಬಾಳದವರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರನ್ನು ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಶಾಸಕ ಸಿ.ಎಸ್.ನಾಡಗೌಡರಿಗೆ ವಿಷಯ ಗೊತ್ತಾದ ಕೂಡಲೇ ನನ್ನನ್ನು ಆಸ್ಪತ್ರೆಗೆ ಕಳಿಸಿ ಆರೋಗ್ಯ ವಿಚಾರಿಸಿ ಸೂಕ್ತ ಚಿಕಿತ್ಸೆ ದೊರಕಿಸಿಕೊಡಲು ಕ್ರಮ ಕೈಕೊಳ್ಳುವಂತೆ ತಿಳಿಸಿದ್ದು ಘಟನೆಗೆ ವಿಷಾಧ ವ್ಯಕ್ತಪಡಿಸಿ ಗಾಯಾಳುಗಳಿಗೆ ಸಾಂತ್ವನ ತಿಳಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular