ವಿಜಯಪುರ : ತೆರೆದ ಬಾವಿಗೆ ಕಾಲು ಜಾರಿ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ನಡೆದಿದೆ.


ತೋಟದ ಮನೆಯ ಸಮೀಪದ ತೆರೆದ ಬಾವಿಗೆ 9ನೇ ತರಗತಿ ವಿದ್ಯಾರ್ಥಿನಿ ಸಾಕ್ಷಿ (15) ಹಾಗೂ ರಕ್ಷಿತಾ (10) ಬಿದ್ದಿದ್ದಾರೆ. ತಡರಾತ್ರಿ ಇಬ್ಬರು ಬಾಲಕಿಯರ ಶವ ಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳನ್ನು ರಕ್ಷಿಸಲು ತಂದೆ ಸಾಬಣ್ಣ (40) ಬಾವಿಗೆ ಜಿಗಿದಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಅವರು ನಾಪತ್ತೆಯಾಗಿದ್ದಾರೆ.
ಸಾಬಣ್ಣಗಾಗಿ ನಿಡಗುಂದಿ ಪೊಲೀಸರು ಹಾಗೂ ಗ್ರಾಮಸ್ಥರು ಶೋಧ ಕಾರ್ಯ ಆರಂಭಿಸಿದ್ದಾರೆ. ತೆಪ್ಪದ ಮೂಲಕ ಬಾವಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

