Friday, May 15, 2026
Flats for sale
Homeರಾಜ್ಯವಿಜಯಪುರ : ಭಾರೀ ಗಾಳಿ-ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು.

ವಿಜಯಪುರ : ಭಾರೀ ಗಾಳಿ-ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು.

ವಿಜಯಪುರ : ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರೀ ಗಾಳಿ ಸಹಿತ ಸುರಿದ ಮಳೆಯಿಂದ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮೃತರನ್ನು ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಬಡಿಗೇರ (28), ಪುತ್ರಿಯರಾದ ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ.

ತಮ್ಮ ಮನೆಯ ದುರಸ್ತಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬವು ಹಳೆಯ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಆದರೆ ಮಂಗಳವಾರ ರಾತ್ರಿ ಸುರಿದ ಭಾರೀ ಗಾಳಿ ಮತ್ತು ಮಳೆಯಿಂದ ಮನೆಯ ಮೇಲ್ಚಾವಣಿ ಏಕಾಏಕಿ ಕುಸಿದ ಪರಿಣಾಮ ನಾಲ್ವರೂ ಅವಶೇಷಗಳಡಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಿಂದಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಳಿಕ ಅವಶೇಷಗಳಡಿ ಸಿಲುಕಿದ್ದ ನಾಲ್ವರ ಮೃತದೇಹಗಳನ್ನು ಹೊರತೆಗೆದರು. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular