2022ರ ಮೂರನೇ ತ್ರೈಮಾಸಿಕದಲ್ಲಿ ಭಾರತದ ಸ್ಮಾರ್ಟ್‌ವಾಚ್ ಮಾರುಕಟ್ಟೆಯು ಶೇ. 171 ಪ್ರತಿಶತದಷ್ಟು (ವರ್ಷದಿಂದ ವರ್ಷಕ್ಕೆ) ಬೆಳವಣಿಗೆ ಹೊಂದುವ ಮೂಲಕ ಭಾರತವು ಜಾಗತಿಕವಾಗಿ ಪ್ರಮುಖ ಸ್ಮಾರ್ಟ್‌ವಾಚ್ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ ಎಂದು ಜನಪ್ರಿಯ ಉದ್ಯಮ ವಿಶ್ಲೇಷಕ ಸಂಸ್ಥೆ ಕೌಂಟರ್‌ಪಾಯಿಂಟ್ ರಿಸರ್ಚ್ ತನ್ನ ವರದಿಯಲ್ಲಿ ಹೇಳಿದೆ.ವಿಶ್ವದ ಸ್ಮಾರ್ಟ್‌ವಾಚ್ ಮಾರುಕಟ್ಟೆಯಲ್ಲಿ ಇದೀಗ ಭಾರತವು ಅತಿದೊಡ್ಡ ಸ್ಮಾರ್ಟ್‌ವಾಚ್ ಮಾರುಕಟ್ಟೆಯಾಗಿ ಮಾರ್ಪಟ್ಟಿದೆ.
ಭಾರತದ ಸ್ಮಾರ್ಟ್ ವಾಚ್ ಮಾರುಕಟ್ಟೆಯು ಶೇ 171 ಪ್ರತಿಶತದಷ್ಟು ಬೆಳೆದು ವಿಶ್ವದ ಅತಿದೊಡ್ಡ ಮಾರುಕಟ್ಟೆಯಾಗಿದೆ. ಒಟ್ಟು ಉತ್ಪಾದನೆಯಾದ ಸ್ಮಾರ್ಟ್‌ವಾಚ್‌ಗಳ ಪೈಕಿ, ಭಾರತದಲ್ಲೇ ಶೇ 30 ರಷ್ಟು ಸ್ಮಾರ್ಟ್‌ವಾಚ್‌ಗಳು ಮಾರಾಟವಾಗಿವೆ ಎಂದು ವರದಿ ತಿಳಿಸಿದೆ.ಹಣದುಬ್ಬರ ಮತ್ತು ಭೌಗೋಳಿಕ ರಾಜಕೀಯ ಬಿಕ್ಕಟ್ಟುಗಳ ಹೊರತಾಗಿಯೂ 2022ರ ಮೂರನೇ ತ್ರೈಮಾಸಿಕದಲ್ಲಿ ಜಾಗತಿಕ ಸ್ಮಾರ್ಟ್‌ವಾಚ್ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ವಾಚ್ ಮಾರಾಟವು ಶೇ 30 ರಷ್ಟುಹೆಚ್ಚಾಗಿದೆ.