Wednesday, July 22, 2026
Homeಜಿಲ್ಲೆಬಂಟ್ವಾಳ : ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಅವಘಡ ,6 ವರ್ಷದ...

ಬಂಟ್ವಾಳ : ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಅವಘಡ ,6 ವರ್ಷದ ಬಾಲಕಿ ಸಾವು,ಹಲವು ವಿದ್ಯಾರ್ಥಿಗಳಿಗೆ ಗಾಯ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಆತಂಕಕಾರಿ ಅವಘಡ ಸಂಭವಿಸಿದೆ.

ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಪೂರ್ವ ಪ್ರಾಥಮಿಕ (ಎಲ್‌ಕೆಜಿ/ಯುಕೆಜಿ) ತರಗತಿಯ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಮೃತ ಬಾಲಕಿಯನ್ನು ವಿದ್ಯಾರ್ಥಿನಿ ಚಿರನ್ವಿ (6) ಎಂದು ತಿಳಿದುಬಂದಿದೆ . ಘಟನೆಯಲ್ಲಿ ಗಾಯಗೊಂಡ ನಾಲ್ವರು ಮಕ್ಕಳನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆ ಮುಗಿದ ಬಳಿಕ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಮರ ಉರುಳಿ ಬಿದ್ದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular