ಶಿರಾ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದ ಘಟನೆ ಶಿರಾ ಅಮರಾಪುರ ರಸ್ತೆ ತಾಲೂಕಿನ ಹುಲಿಕುಂಟೆ ಗೇಟ್ ಹತ್ತಿರ ಬಸ್ ಆಯಾ ತಪ್ಪಿ ಮರಕ್ಕೆ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಸ್ತೆ ಕಾಮಗಾರಿ ಆರಂಭ ವಾಗಿ ಹಲವಾರು ತಿಂಗಳು ಕಳೆದರು ಮುಗಿಯದ ಕಾಮಗಾರಿ ಕಳೆದ ಎರಡು ದಿನದಿಂದ ಮಳೆ ಕಾರಣ ರಸ್ತೆಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದೆ. ಬಸ್ ಹಳ್ಳಕ್ಕೆ ನುಗ್ಗಿದ ಪರಿಣಾಮ ಚಾಲಕ ಸೇರಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಕಾಮಗಾರಿ ಮಾಡಿದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ಹೊರ ಹಾಕಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕ್ರೈನ್ ಮೂಲಕ ಹಳ್ಳದಲ್ಲಿ ಬಿದ್ದ ಬಸ್ ಅನ್ನು ಹೊರ ತೆಗೆದಿದ್ದಾರೆ.


