Thursday, March 12, 2026
Flats for sale
Homeರಾಜ್ಯಹೊಸನಗರ : ಮಾರುತಿ ಓಮ್ನಿ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ 7 ಮಂದಿಗೆ...

ಹೊಸನಗರ : ಮಾರುತಿ ಓಮ್ನಿ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ 7 ಮಂದಿಗೆ ಗಂಭೀರ ಗಾಯ.

ಹೊಸನಗರ : ಮಾರುತಿ ಓಮ್ನಿ ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 07 ಮಂದಿಗೆ ಗಂಭೀರ ಗಾಯವಾದ ಘಟನೆ ತಾಲೂಕಿನ ಎಂ ಗುಡ್ಡೇಕೊಪ್ಪದಲ್ಲಿ ಗುರುವಾರ ಸಂಜೆ ನಡೆದಿದೆ.

ಓಮ್ನಿಯಲ್ಲಿ ಸಂಚರಿಸುತ್ತಿದ್ದ ಒಂದೇ ಕುಟುಂಬದ 4 ಮಕ್ಕಳು ಸೇರಿದಂತೆ 07 ಮಂದಿಗೆ ಗಂಭೀರ ಗಾಯಗಳಾಗಿದ್ದು ಇವರೆಲ್ಲರನ್ನು ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಗುಡ್ಡ ನಿವಾಸಿಗಳಾಗಿದ್ದು ದೇವಸ್ಥಾನಕ್ಕೆ ಭೇಟಿ ನೀಡಿ ಊರಿಗೆ ವಾಪಾಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ.

ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಅಪಘಾತದ ರಭಸಕ್ಕೆ ಓಮ್ನಿ ಸಂಪೂರ್ಣ ಜಖಂಗೊಂಡಿದ್ದು ಚಾಲಕನನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

ಗಾಯಾಳುಗಳನ್ನು ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.,

RELATED ARTICLES

LEAVE A REPLY

Please enter your comment!
Please enter your name here

Most Popular