Thursday, July 23, 2026
Homeರಾಜ್ಯಶಿವಮೊಗ್ಗ ; ಚಲಿಸುತ್ತಿರುವ KSRTC ಬಸ್ಸಿನ ಮೇಲೆ ಉರಳಿದ ವಿದ್ಯುತ್ ಕಂಬ,ಪ್ರಯಾಣಿಕರು ಪ್ರಾಣಪಾಯದಿಂದ ಪಾರು.!

ಶಿವಮೊಗ್ಗ ; ಚಲಿಸುತ್ತಿರುವ KSRTC ಬಸ್ಸಿನ ಮೇಲೆ ಉರಳಿದ ವಿದ್ಯುತ್ ಕಂಬ,ಪ್ರಯಾಣಿಕರು ಪ್ರಾಣಪಾಯದಿಂದ ಪಾರು.!

ಶಿವಮೊಗ್ಗ ; ಚಲಿಸುತ್ತಿದ್ದ ಸರ್ಕಾರಿ ಬಸ್ ಮೇಲೆ ವಿದ್ಯುತ್ ಕಂಬ ಉರುಳಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ – ನಿಟ್ಟೂರು ಮಾರ್ಗದಲ್ಲಿ ನಡೆದಿದೆ.

ಬೆಂಗಳೂರಿನಿಂದ ಹೊಸನಗರ – ನಗರ ಮಾರ್ಗವಾಗಿ ಕೊಲ್ಲೂರು ಕಡೆ ಬಸ್ ಚಲಿಸುತ್ತಿದ್ದ ಬಸ್‌ನ ಹಿಂಬದಿಯ ಒಂದು ಬದಿಗೆ ತಂತಿ ಸಮೇತ ವಿದ್ಯುತ್ ಕಂಬ ಬಿದ್ದಿದ್ದು ಅದೃಷ್ಟವಶಾತ್ ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಕಂಬ ತೆರವುಗೊಳಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ.
ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಬಿರುಗಾಳಿ ಸಹಿತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಸಾಮಾನ್ಯರ ಜೀವನ ಅಸ್ತವ್ಯಸ್ತಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular