Friday, March 13, 2026
Flats for sale
Homeರಾಜ್ಯಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ದಾರುಣ ಸಾವು.

ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ದಾರುಣ ಸಾವು.

ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಜ್ಯೂಸ್​ ಬಾಟಲಿ ಮುಚ್ಚಳ ನುಂಗಿಒಂದೂವರೆ ವರ್ಷದ ಮಗು ಉಸಿರಾಟ ಸಮಸ್ಯೆಯಿಂದ ದಾರುಣ ಸಾವನಪ್ಪಿದ ದುರ್ಘಟನೆ ನಡೆದಿದೆ.

ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್(1.5) ಮೃತಪಟ್ಟ ಮಗು.

ಬುಧವಾರ ಬೆಳಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ನಂದೀಶ್ ಆಟವಾಡುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ನುಂಗಿದ ಮುಚ್ಚಳ ಗಂಟಲಲ್ಲಿ ಸಿಲುಕಿದೆ. ತಕ್ಷಣವೇ ಕುಟುಂಬದವರು ವಾಹನವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗದೆ ಮಗು ಸಾವನ್ನಪ್ಪಿದೆ. ಉಸಿರಾಟದ ತೊಂದರೆಯಿಂದ ನಂದೀಶ್ ಮೃತಪಟ್ಟಿದ್ದಾನೆ.

RELATED ARTICLES

LEAVE A REPLY

Please enter your comment!
Please enter your name here

Most Popular