Sunday, August 2, 2026
Homeರಾಜ್ಯಶಿವಮೊಗ್ಗ : ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ 80 ವರ್ಷದ ನಿವೃತ್ತ ಇಂಜಿನಿಯರ್ ಸಾವು.

ಶಿವಮೊಗ್ಗ : ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ 80 ವರ್ಷದ ನಿವೃತ್ತ ಇಂಜಿನಿಯರ್ ಸಾವು.

ಶಿವಮೊಗ್ಗ : ನಗರದ ವಿನಾಯಕ ನಗರದಲ್ಲಿರುವ ದತ್ತಾತ್ರೇಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ನಡೆದ ದುರಂತದಲ್ಲಿ ನಿವೃತ್ತ ಇಂಜಿನಿಯರ್ ಕುಮಾರಸ್ವಾಮಿ (80) ಲಿಫ್ಟ್‌ನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.

ಬೆಳಿಗ್ಗೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳಿದ್ದ ಕುಮಾರಸ್ವಾಮಿ ಅವರು ಮೇಲಿನ ಮಹಡಿಗೆ ತೆರಳಲು ಲಿಫ್ಟ್‌ಗೆ ಪ್ರವೇಶಿಸಿ ಬಟನ್ ಒತ್ತಿದ ವೇಳೆ, ಮೇಲಿನಿಂದ ಕೆಳಕ್ಕೆ ಬಂದ ಲಿಫ್ಟ್‌ನ ಅಡಿಭಾಗಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಲಿಫ್ಟ್‌ನಲ್ಲಿ ಸಿಲುಕಿದ್ದ ವೃದ್ಧರನ್ನು ಹೊರತೆಗೆದರು. ತಕ್ಷಣವೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೃತರ ಪತ್ನಿ ಲಲಿತಾ ಕುಮಾರಸ್ವಾಮಿ ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (UDR) ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular