Sunday, August 2, 2026
Homeರಾಜ್ಯಶಿವಮೊಗ್ಗ : ಭಾರೀ ಮಳೆಗೆ ಶಿವಮೊಗ್ಗದಲ್ಲಿ ಗುಡ್ಡ ಕುಸಿತ : ಒಂದೇ ಕುಟುಂಬದ ಮೂವರು ...

ಶಿವಮೊಗ್ಗ : ಭಾರೀ ಮಳೆಗೆ ಶಿವಮೊಗ್ಗದಲ್ಲಿ ಗುಡ್ಡ ಕುಸಿತ : ಒಂದೇ ಕುಟುಂಬದ ಮೂವರು ದಾರುಣ ಸಾವು.

ಶಿವಮೊಗ್ಗ : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ತಡರಾತ್ರಿ ಸುಮಾರು 2:30ರ ವೇಳೆಗೆ ಸುರಿದ ಭಾರೀ ಮಳೆಯಿಂದ ದಿಢೀರ್ ಗುಡ್ಡ ಕುಸಿದಿದ್ದು, ಗುಡ್ಡದ ಕೆಳಭಾಗದಲ್ಲಿ ಶೆಡ್ ನಿರ್ಮಿಸಿಕೊಂಡು ವಾಸವಾಗಿದ್ದ ಕುಟುಂಬದ ಮೇಲೆ ಮಣ್ಣು ಕುಸಿದು ಬಿದ್ದಿದೆ.

ದುರಂತದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಮಲ್ಲಿಕಾರ್ಜುನ (35), ಪತ್ನಿ ನಾಗವೇಣಿ (28) ಹಾಗೂ ಅವರ 3 ವರ್ಷದ ಪುತ್ರ ಸಂತೋಷ್ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಧಾವಿಸಿ ಮಣ್ಣಿನಡಿ ಸಿಲುಕಿದ್ದವರನ್ನು ಹೊರತೆಗೆದು ರಕ್ಷಣಾ ಕಾರ್ಯ ನಡೆಸಿದರು. ಪಕ್ಕದ ಶೆಡ್‌ನಲ್ಲಿ ವಾಸವಾಗಿದ್ದ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಕುಸಿತ ಸಂಭವಿಸಿರುವ ಈ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular