Friday, March 13, 2026
Flats for sale
Homeರಾಜ್ಯಶಿವಮೊಗ್ಗ : 60 ಅಡಿ ಆಳದ ಪ್ರಪಾತಕ್ಕೆ ಉರುಳಿದ ದಾವಣಗೆರೆ - ಮಂಗಳೂರು ನಡುವಿನ ಖಾಸಗಿ...

ಶಿವಮೊಗ್ಗ : 60 ಅಡಿ ಆಳದ ಪ್ರಪಾತಕ್ಕೆ ಉರುಳಿದ ದಾವಣಗೆರೆ – ಮಂಗಳೂರು ನಡುವಿನ ಖಾಸಗಿ ಬಸ್,45 ಪ್ರಯಾಣಿಕರು ಪ್ರಾಣಪಾಯದಿಂದ ಪಾರು…!

ಶಿವಮೊಗ್ಗ ; ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ಫೈಲ್ ಆಗಿ ಸುಮಾರು 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.

ದಾವಣಗೆರೆಯಿಂದ ಮಂಗಳೂರು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ ಭಾನುವಾರ ರಾತ್ರಿ 1.45 ಗಂಟೆಗೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಪ್ರಪಾತಕ್ಕೆ ಉರುಳಿದೆ. ಬಸ್ ನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆಯ ಎರಡೂ ಬದಿ ಯಾವುದೇ ತಡೆಗೋಡೆ ಇಲ್ಲ. ರಸ್ತೆ ಬದಿ ಮಣ್ಣು ಹಾಕಿ ಎತ್ತರಿಸಲಾಗಿದ್ದು, ಬದಿಗೆ ಅಳವಡಿಸಿರುವ ಕಬ್ಬಿಣದ ಪಟ್ಟಿಗಳು ಮುಚ್ಚಿಹೋಗಿವೆ. ಇದರಿಂದ ಹೆಚ್ಚಿನ ಅಪಘಾತ ಸಂಭವಿಸುತ್ತಿವೆ. ತಡೆಗೋಡೆ ನಿರ್ಮಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಚಾಲಕ ಬಸವರಾಜ ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular