ಸಂಪಾಜೆ : ಸಂಪಾಜೆ ಸಮೀಪದ ದೇವರಕೊಲ್ಲಿ ಹಾಗೂ ಕೊಯನಾಡುವಿನ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟ ಘಟನೆ ನಡೆದಿದೆ.


ಮೃತಪಟ್ಟವರನ್ನು ಗೋಣಿಕೊಪ್ಪಲಿನ ನಿಹಾದ್, ರಿಷಾನ್, ರಾಶಿಬ್ ಮತ್ತು ಅನೀಶ್ ಎಂದು ಗುರುತಿಸಲಾಗಿದೆ.ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.


