ಸುಬ್ರಹ್ಮಣ್ಯ: ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳು ಇಲ್ಲಾ. ಪಕ್ಷದ ಹೈಕಮಾಂಡ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಹೈಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು
ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ. ಸೂಕ್ತ ಅಭ್ಯರ್ಥಿಗಳನ್ನು ಪಕ್ಷ ನಿರ್ಧರಿಸಲಿದೆ. ಸುಳ್ಯಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಆಕಾಂಕ್ಷಿಗಳು ಇದ್ದಾರೆ. ಸ್ಪರ್ಧೆಗೆ ಆಕಾಂಕ್ಷೆ ಯಾರೂ ವ್ಯಕ್ತಪಡಿಸಬಹುದು. ಆದರೆ ನಿರ್ಧಾರವನ್ನು ಪಾರ್ಟಿ ಮಾಡಲಿದೆ. ಅದರ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದ ಅವರು ರಾಜ್ಯದಲ್ಲಿ ಈ ಬಾರಿ 135 ಕ್ಕೂ ಅಧಿಕ ಸೀಟುಗಳನ್ನು ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.
ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಕ್ಷೇತ್ರದಲ್ಲಿ ತುಲಾಭಾರ ಸೇವೆ ನೆರವೇರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.