ಮಂಗಳೂರು : ಸುರತ್ಕಲ್ ಜಂಕ್ಷನ್ ಬಳಿ ಡಿ.11 ಸೋಮವಾರದಂದು ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬಾಲಕಿಯರು ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬರುತಿತ್ತು ಎಂದು ತಿಳಿದುಬಂದಿದೆ.
ಇಬ್ಬರು ಬಾಲಕಿಯರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಕೇರಳ ಮೂಲದವರಾಗಿದ್ದಾರೆ. ಈ ಪೈಕಿ ಓರ್ವ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.


