Monday, March 16, 2026
Flats for sale
Homeರಾಜ್ಯಸುರಪುರ: ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆ ಮೇಲೆ ಪೊಲೀಸರ ದಾಳಿ.

ಸುರಪುರ: ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆ ಮೇಲೆ ಪೊಲೀಸರ ದಾಳಿ.

ಸುರಪುರ: ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆ ಮೇಲೆ ಮಂಗಳವಾರ ತಡರಾತ್ರಿ ಪೊಲೀಸರು ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ.ಅಕ್ರಮ ಮರಳು ಸಾಗಾಟದ ಕುರಿತು ಹಿಂದಿನಿಂದಲೂ ಮಾತುಗಳು ಕೇಳಿ ಬರುತ್ತಿದ್ದು ಪೊಲೀಸರು ದಾಳಿಗೆ ಮುಂದಾಗಿದ್ದಾರೆ.

ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದ ಹೊರವಲಯದಲ್ಲಿನ ಸರ್ವೆ ನಂಬರ್ 143,172 ರಲ್ಲಿ ಹಾಗೂ ಬೆನಕನಹಳ್ಳಿಯ ಸರ್ವೇ ನಂಬರ್ 70ರಲ್ಲಿ ಅಕ್ರಮ ಮರಳು ಸಂಗ್ರಹಿಸಲಾಗಿತ್ತು.

ಸುಮಾರು 150 ಟಿಪ್ಪರ್‌ಗಿಂತ ಹೆಚ್ಚಿನ ಪ್ರಮಾಣದ ಮರಳು ವಶಪಡಿಸಿಕೊಳ್ಳಲಾಗಿದ್ದು, ಅಂದಾಜು ಮೌಲ್ಯ 12 ಲಕ್ಷ ರೂಪಾಯಿಗಳು ಎನ್ನಲಾಗಿದೆ.1076 ಕ್ಯೂಬಿಕ್ ನಷ್ಟು ಮರಳು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಮರಳು ಯಾರಿಗೆ ಸೇರಿದ್ದು ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ.

ದಾಳಿಯಲ್ಲಿ ತಹಸಿಲ್ದಾರ್ ವಿಜಯ್ ಕುಮಾರ್ ಕೆ ಡಿವೈಎಸ್ಪಿ ಜಾವಿದ್ ಇನಾಂದಾರ್ ಪೊಲೀಸ್ ಇನ್ಸ್ಪೆಕ್ಟರ್ ಆನಂದ ವಾಘಮೊಡೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.ಈ ಕುರಿತು ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular