Thursday, November 19, 2026
Homeಜಿಲ್ಲೆಸುಳ್ಯ : ಗಾಂಧಿನಗರ ಶಾಲಾ ಮೈದಾನದ ಬಳಿ ಗೋವುಗಳ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ..!

ಸುಳ್ಯ : ಗಾಂಧಿನಗರ ಶಾಲಾ ಮೈದಾನದ ಬಳಿ ಗೋವುಗಳ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ..!

ಸುಳ್ಯ : ಸುಳ್ಯದ ಗಾಂಧಿನಗರ ಶಾಲಾ ಮೈದಾನದ ಬಳಿ ಎರಡು ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವೆಂಬರ್ 18ರಂದು ಬೆಳಗ್ಗಿನ ಜಾವ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ಜಾನುವಾರುಗಳ ಕಳ್ಳತನಕ್ಕೆ ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು.
ಮಾಹಿತಿ ಮೇರೆಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಇಬ್ಬರು ವ್ಯಕ್ತಿಗಳು ಮೈದಾನದಲ್ಲಿದ್ದ ಕಂಬಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ ಎ. (28) ಮತ್ತು ಸಂಶುದ್ದೀನ್ ಎಸ್.ಎಂ. (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಕಳ್ಳತನ ಮಾಡಲು ಪ್ರಯತ್ನಿಸುತ್ತಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸ್ ಪ್ರಕಟಣೆ ತಿಳಿಸಿದೆ.

ವಾಹನ ಹಾಗೂ ಜಾನುವಾರುಗಳ ವಶ:

ಕೃತ್ಯಕ್ಕೆ ಆರೋಪಿಗಳು ಬಳಸಲು ಬಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 161/2026ರಂತೆ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಜೊತೆಗೆ 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular